'ಬುದ್ಧನ ಕಿವಿ' ದಯಾನಂದ ಅವರ ಎರಡನೇ ಕಥಾ ಸಂಕಲನ. ಈ ಸಂಕಲನದ ಕತೆಗಳು ಸಮಕಾಲೀನ ವಾಸ್ತವ ಬದುಕಿನ ತಲ್ಲಣಗಳನ್ನು 'ಕತೆ' ಎಂಬ ಆವರಣದ ಮೂಲಕ ಕಟ್ಟಿಕೊಡಲು ಪ್ರಯತ್ನಿಸುತ್ತವೆ. ಈ ಸಂಕಲನದ ಎದ್ದುಕಾಣುವ ಅಂಶವೆಂದರೆ ನುರಿತ ಕಥೆಗಾರನೊಬ್ಬ ನಿಭಾಯಿಸಬಹುದಾದ ಎಲ್ಲ ರೀತಿಯ ವಸ್ತುಗಳನ್ನೂ ದಯಾನಂದರು ಪ್ರಯೋಗಕ್ಕೆ ಒಡ್ಡಿರುವುದು.
*
ದಯಾನಂದ
ಹುಟ್ಟಿದ್ದು 1988ರ ಅಂಬೇಡ್ಕರ್ ಜಯಂತಿಯಂದು ನಾಗಮಂಗಲ ತಾಲ್ಲೂಕಿನ ಬೆಳ್ಳೂರು, ಓದಿ ಬೆಳೆದಿದ್ದು ಬೆಂಗಳೂರಿನಲ್ಲಿ. ಕನ್ನಡ ಸಾಹಿತ್ಯ, ಇಂಗ್ಲಿಷ್ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. ‘ಸಮಯ ಟಿವಿ’, ‘ಪ್ರಜಾವಾಣಿ’ ಮತ್ತು ‘ಸಮಾಚಾರ.ಕಾಂ’ ಸುದ್ದಿಸಂಸ್ಥೆಗಳಲ್ಲಿ ಒಂದು ದಶಕದ ಪತ್ರಿಕೋದ್ಯಮದ ಅನುಭವ. ಸದ್ಯ ಬೆಂಗಳೂರಿನಲ್ಲಿ ಮಾಧ್ಯಮ ಅಧ್ಯಾಪಕ.
ಕನ್ನಡ ಪುಸ್ತಕ ಪ್ರಾಧಿಕಾರದ ಪ್ರೋತ್ಸಾಹಧನ ಪಡೆದು 2005ರಲ್ಲಿ ಪ್ರಕಟಗೊಂಡ ನಾಟಕ ‘ಬಾಳಪೂರ್ಣ’. ಛಂದ ಪುಸ್ತಕ ಬಹುಮಾನ ಪಡೆದು 2017ರಲ್ಲಿ ಪ್ರಕಟಗೊಂಡ ಕಥಾ ಸಂಕಲನ ‘ದೇವರು ಕಚ್ಚಿದ ಸೇಬು’. ‘ಬುದ್ಧನ ಕಿವಿ’ ಇವರ ಎರಡನೇ ಕಥಾ ಸಂಕಲನ. ಇವರ ಕತೆಗಳಿಗೆ ಬಸವರಾಜ ಕಟ್ಟೀಮನಿ ಯುವ ಪುರಸ್ಕಾರ, ಗುಲಬರ್ಗಾ ವಿಶ್ವವಿದ್ಯಾಲಯದ ಚಿನ್ನದ ಪದಕ, ಸಂಕ್ರಮಣ ಕಥಾ ಪುರಸ್ಕಾರ, ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯ ಬಹುಮಾನ, ಸಮಾಜಮುಖಿ ಕಥಾ ಪುರಸ್ಕಾರ ಲಭಿಸಿದೆ.
ಇವರ ಕತೆಗಳು ಎರಡು ಬಾರಿ ಟೋಟೋ ಸಾಹಿತ್ಯ ಪುರಸ್ಕಾರದ ಲಾಂಗ್ ಲಿಸ್ಟ್‌ನಲ್ಲಿ ಇದ್ದವು. ಇವರ ಕತೆಯೊಂದು ವಿಜಯ ಕರ್ನಾಟಕ ಕಥಾಸ್ಪರ್ಧೆಯ ಅಂತಿಮ 15ರಲ್ಲಿತ್ತು. ಓದುಗರ ಪ್ರೀತಿ ಮತ್ತು ವಿಮರ್ಶಕರ ಮೆಚ್ಚುಗೆ ಎರಡನ್ನೂ ಸಮನಾಗಿ ಪಡೆದ ಹೆಗ್ಗಳಿಕೆ ಇವರ ಕತೆಗಳದ್ದು.
ಪುಟಗಳು : 200
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !