ಅಲ್ಲಮನ ವಚನಗಳ ಓದು (ಆಡಿಯೋ  ಬುಕ್)

ಅಲ್ಲಮನ ವಚನಗಳ ಓದು (ಆಡಿಯೋ ಬುಕ್)

Regular price
$7.99
Sale price
$7.99
Regular price
Sold out
Unit price
per 
Shipping does not apply

ಪ್ರಕಾಶಕರು: ನಾಗು ಸ್ಮಾರಕ ಪ್ರಕಾಶನ

Publisher: Naagu Smaraka Prakashana

 

ಬರೆದವರು ಮತ್ತು ಓದಿದವರು: ಸಿ.ಪಿ. ನಾಗರಾಜ

ಆಡಿಯೋ ಪುಸ್ತಕದ ಅವಧಿ : 5 ಗಂಟೆ 30 ನಿಮಿಷ

 

ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದರು.

ಯಾವ ಯಾವ ಜಡ್ಡುಗಟ್ಟಿದ ಕಾಲಗಳಲ್ಲಿ ಸೂಕ್ಷ್ಮ ಸಂವೇದನೆ ಉಳ್ಳವರೂ, ವಿಚಾರವಂತರೂ ಆದ ಕೆಲವೇ ಜನ ತಮ್ಮ ಸುತ್ತಮುತ್ತಣ ಪರಿಸ್ಥಿತಿಯನ್ನು ಮತ್ತು ಅದನ್ನು ನಿಯಂತ್ರಿಸಿಕೊಂಡು ಬಂದ ರೂಢಿಗತವಾದ ವ್ಯವಸ್ಥೆ ಹಾಗೂ  ಸಂಪ್ರದಾಯಗಳನ್ನು ಪ್ರಶ್ನಿಸಲು ತೊಡಗುತ್ತಾರೋ, ಪ್ರತಿಭಟಿಸಲು ತೊಡಗುತ್ತಾರೋ ಅಂತಹ ಕಾಲಗಳನ್ನು ಸಂಕ್ರಮಣ ಕಾಲಗಳೆಂದು ಕರೆಯಬಹುದು. ಕನ್ನಡ ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲಿ ಹನ್ನೆರಡನೆಯ ಶತಮಾನ ಇಂತಹ ಒಂದು ಸಂಕ್ರಮಣ ಕಾಲ. ಹನ್ನೆರಡನೆಯ ಶತಮಾನದ ವಚನಕಾರರು ಅಥವಾ ಶಿವಶರಣಶರಣೆಯರು ಮೂಲತಃ ನಿಷ್ಠುರ ವಿಮರ್ಶಕರು. ಪರಂಪರೆಯನ್ನು  ಕುರಿತು, ಧರ್ಮವನ್ನು ಕುರಿತು, ದೇವರನ್ನು ಕುರಿತು, ತಮ್ಮ ಸುತ್ತಣ ಸಾಮಾಜಿಕ ಪರಿಸರವನ್ನು ಕುರಿತು, ಎಲ್ಲಕ್ಕೂ ಮಿಗಿಲಾಗಿ ತಮ್ಮನ್ನೇ ಕುರಿತು ವಸ್ತುನಿಷ್ಠವಾಗಿ ವಿಮರ್ಶೆ ಮಾಡಿದವರು.

-ಜಿ.ಎಸ್.ಶಿವರುದ್ರಪ್ಪ  " ವಚನಕಾರರ ವಿಚಾರ ಕ್ರಾಂತಿ "   ಅನುರಣನ (1978)

 

ಸಿ.ಪಿ.ನಾಗರಾಜ ಅವರು ಇವುಗಳಲ್ಲಿ ಕೆಲವು ವಚನಗಳನ್ನು ಕೈಗೆತ್ತಿಕೊಂಡು ಅರ್ಥಪೂರ್ಣವಾಗಿ ವಿವರಿಸಿದ್ದಾರೆ.  

 

ಈಗ ಸಿ.ಪಿ.ನಾಗರಾಜ ಅವರದ್ದೇ ದನಿಯಲ್ಲಿ ಕೇಳಿ ನಿಮ್ಮ ಮೈಲ್ಯಾಂಗ್ ಮೊಬೈಲ್ ಆಪ್ ಅಲ್ಲಿ ಮಾತ್ರ.