ಗೌರೀಶ ಕಾಯ್ಕಿಣಿ ಅವರ ಆಯ್ದ ಬರಹಗಳು

ಗೌರೀಶ ಕಾಯ್ಕಿಣಿ ಅವರ ಆಯ್ದ ಬರಹಗಳು

Regular price
$3.99
Sale price
$3.99
Regular price
Sold out
Unit price
per 
Shipping does not apply

ಪ್ರಕಾಶಕರು: ಅಕ್ಷರ ಪ್ರಕಾಶನ


Publisher: Akshara Prakashana

 

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು -- ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ -- ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು- ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

 

ಗೌರೀಶ ಕಾಯ್ಕಿಣಿ

ಗೌರೀಶ ವಿಟ್ಠಲ ಕಾಯ್ಕಿಣಿಯವರು ೧೨, ಸೆಪ್ಟೆಂಬರ್ ೧೯೧೩ರಂದು ಉತ್ತರಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದರು. ಗೋಕರ್ಣ, ಕುಮಟಾಗಳಲ್ಲಿ ವಿದ್ಯಾಭ್ಯಾಸ ಮಾಡಿ, ಅಧ್ಯಾಪಕರಾಗಿ ಕೆಲಸ ಮಾಡಿದರು. ಬಹುಭಾಷಾ ವಿದ್ವಾಂಸರಾದ ಇವರು ಗೋಕರ್ಣದಂಥ ಸಣ್ಣ ಊರಿನಲ್ಲಿಯೇ ನೆಲೆಸಿ ಹಲವು ಕತೆ, ಕವಿತೆ, ನಾಟಕಗಳನ್ನೂ ಪೌರ್ವಾತ್ಯ ಮತ್ತು ಪಾಶ್ಚಿಮಾತ್ಯ ಕಾವ್ಯಶಾಸ್ತ್ರ ಮತ್ತು ತತ್ತ್ವಶಾಸ್ತ್ರಗಳ ಗ್ರಂಥಗಳನ್ನೂ ನೂರಾರು ವೈಚಾರಿಕ ಮತ್ತು ವಿಮರ್ಶಾಲೇಖನಗಳನ್ನೂ ಬರೆದಿದ್ದಾರೆ. ಇವರು ಹಲವುಕಾಲ ದಿನಕರ ದೇಸಾಯಿಯವರ ‘ಜನಸೇವಕ’ ಪತ್ರಿಕೆಯ ಸಂಪಾದಕರಾಗಿದ್ದರು. ‘ಕಂಪಿನ ಕರೆ: ಬೇಂದ್ರೆ ಕಾವ್ಯದೃಷ್ಟಿ’, ‘ವಿಚಾರವಾದ’, ‘ಕ್ರೌಂಚಧ್ವನಿ’, ‘ನವಮಾನವತಾವಾದ’ ಮುಂತಾದವು ಇವರ ಪ್ರಮುಖ ಕೃತಿಗಳು. ಹತ್ತು ಸಂಪುಟಗಳಲ್ಲಿ ಇವರ ಸಮಗ್ರ ಬರಹಗಳು ಪ್ರಕಟವಾಗಿವೆ. ಕನ್ನಡ ಸಾಹಿತ್ಯ ಪರಿಷತ್ತಿನ ವಜ್ರಮಹೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ ಮುಂತಾದ ಪುರಸ್ಕಾರಗಳು ಇವರಿಗೆ ಸಂದಿವೆ. ಇವರು ೧೪, ನವೆಂಬರ್ ೨೦೦೨ರಂದು ನಿಧನರಾದರು.

 

ಪುಟಗಳು: 150

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !