ಕಡೆಗೋಲು (ಇಬುಕ್)

ಕಡೆಗೋಲು (ಇಬುಕ್)

Regular price
$4.99
Sale price
$4.99
Regular price
Sold out
Unit price
per 
Shipping does not apply

GET FREE SAMPLE

ಕನ್ತಡನಾಡು ಏಕೀಕರಣಗೊಂಡು ಐವತ್ತು ವರ್ಷ ತುಂಬಿದ ಚಿನ್ನದ ಹಬ್ಬದ ಹರ್ಷದ ಈ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯವು ಕನ್ನಡವನ್ನು ಕಟ್ಟಿದ ಹಿರಿಯರ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವ ಕನಸಿನ ಹೊನ್ನಾರುಮಾಲೆ ಇಲ್ಲಿ ರೂಪು ತಾಳಿದೆ. ಕೃಷಿ ಸಂಸ್ಕೃತಿಯನ್ನು ನೆಲದ ಸಂಸ್ಕೃತಿಯನ್ನಾಗಿ ಭಾವಿಸಿ ಪರಿಭಾವಿಸಿ ಕಟ್ಟಿ ಬೆಳೆಸಿದ ಕನ್ನಡನಾಡಿನಲ್ಲಿ ಕನ್ನಡ ಸಾಹಿತ್ಯ ಸಂಸ್ಕೃತಿಯ ಬೀಜವನ್ನು ಬಿತ್ತಿ ಚಿನ್ನದ ಬೆಳೆಗಳನ್ನು ಬೆಳೆದ ಹಿರಿಯ ಬೇಸಾಯಗಾರರ ಒಂದೊಂದು ಹೊಸ ಬೆಳೆಯನ್ನು ನಾಡಿಗೆ ಒಪ್ಪಿಸುವ ಧನ್ಯತಾ ಭಾವ ನಮ್ಮದು. ಹೀಗೆ ಹೊನ್ನಾರುಮಾಲೆ ಚಿನ್ನದ ಬೆಳೆಯೂ ಹೌದು, ಕನ್ನಡದ ಚಿಣ್ಣರಿಗೆ ಹೊಸಬೆಳೆ ಬೆಳೆಯಲು ಪ್ರೇರಣೆಯೂ ಹೌದು.

ಕಳೆದ ಐವತ್ತು ವರ್ಷಗಳಿಂದ ಕನ್ನಡ ಸಾಹಿತ್ಯ ಸಂಸ್ಕೃತಿಯ ಮಣ್ಣಿನಲ್ಲಿ ತಮ್ಮ ಅನುಭವ ಮತ್ತು ಅಧ್ಯಯನದ ಮೂಲಕ ಉತ್ಸಾಹ ಪ್ರೀತಿ ಮತ್ತು ಪರಿಶ್ರಮಗಳಿಂದ ನಿರಂತರವಾಗಿ ಕನ್ನಡದ ಬಹುಬೆಳೆಗಳನ್ನು ಬೆಳೆಸಿಕೊಂಡು ಬಂದ ಹಿರಿಯರ ಹೊಸಬೆಳೆಯ ಕನ್ನಡ ಕಾವ್ಯತತ್ತ್ವ ಚಿಂತನೆಯಲ್ಲಿ ಅನನ್ಯ ಫಲಗಳನ್ನು ಪಡೆಯಲಾಗಿದೆ. ಸಾಹಿತ್ಯ,ಬದುಕು,ಸಂಸ್ಕೃತಿ ಇವುಗಳ ಬಗ್ಗೆ ಐವತ್ತು ವರ್ಷಗಳ ಹಿಂದೆ ಇದ್ದ ಪರಿಕಲ್ಪನೆಗಳು ಇಂದು ಬದಲಾವಣೆಗೊಂಡಿವೆ. ಯಾವುದು ಸಾಹಿತ್ಯ, ಯಾವುದು ಸಾಹಿತ್ಯ ಅಲ್ಲ ಎನ್ನುವ ಚರ್ಚೆ ಕಾಲಕಾಲಕ್ಕೆ ನಡೆದು ಬೇರೆ ಬೇರೆ ಅರ್ಥಗಳನ್ನು ಶೋಧಿಸುತ್ತ ಈ ಹಂತವನ್ನು ತಲುಪಿದೆ. ಸಾಹಿತ್ಯ ಮತ್ತು ಸಂಸ್ಕೃತಿ, ಸಾಹಿತ್ಯ ಮತ್ತು ಬದುಕು ಎನ್ನುವ ಭಿನ್ನತೆಗಳು ಕಣ್ಮರೆಯಾಗಿ ಸಂಕೀರ್ಣ ಹಾಗೂ ವೈವಿದ್ಯದ ವಿನ್ಯಾಸಗಳು ಕಾಣಿಸಿಕೊಂಡಿವೆ. ಸೃಜನಶೀಲ ಮತ್ತು ಸೃಜನೇತರ ಎನ್ನುವ ಪ್ರಭೇದಗಳು ಸಾಹಿತ್ಯ ಚರ್ಚೆಗಳಲ್ಲಿ ಹಿಂದಕ್ಕೆ ಸರಿದಿವೆ.ಸಾಹಿತ್ಯದ ಪಠ್ಯ ಮತ್ತು ಪರಿಸರ ಎನ್ನುವ ವರ್ಗೀಕರಣ ಅಪ್ರಸ್ತುತವಾಗಿದೆ. ಸಾಹಿತ್ಯಕ,ಸಾಮಾಜಿಕ,ಆರ್ಥಿಕ,ಸಾಂಸ್ಕೃತಿಕ, ರಾಜಕೀಯ ಎನ್ನುವ ಪರಿಭಾಷೆಗಳು ಈಗ ಪ್ರತ್ಯೇಕ ಅಸ್ತಿತ್ವಗಳನ್ನು ಕಳೆದುಕೊಂಡು ಒಂದು ಇನ್ನೊಂದರೊಡನೆ ಮಿಳಿತವಾಗಿ’ಸಾಹಿತ್ಯ’ಎನ್ನುವುದು ಸರ್ವವ್ಯಾಪಿಯಾಗಿದೆ ಮತ್ತು ಸರ್ವರಿಗೂ ಸಲ್ಲುವಂತದ್ದಾಗಿದೆ.

 

ಬಿ.ಎ. ವಿವೇಕ ರೈ
ಕುಲಪತಿ

 

ಪುಟಗಳು : 200

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !