ವಿಜ್ಞಾನ-ಸಂಸ್ಕೃತಿ

ವಿಜ್ಞಾನ-ಸಂಸ್ಕೃತಿ

Regular price
$5.99
Sale price
$5.99
Regular price
Sold out
Unit price
per 
Shipping does not apply

ಪ್ರಕಾಶಕರು: ಅಕ್ಷರ ಪ್ರಕಾಶನ


Publisher: Akshara Prakashana

 

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು -- ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ -- ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು- ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

 

ರೊದ್ದಂ ನರಸಿಂಹ

ಡಾ. ರೊದ್ದಂ ನರಸಿಂಹ ಅವರು ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ವ್ಯಾಸಂಗಮಾಡಿ ಬಳಿಕ ಅಮೇರಿಕಾದ ಕ್ಯಾಲ್‌ಟೆಕ್‌ನಲ್ಲಿ ವೈಮಾನಿಕ ಶಾಸ್ತ್ರಕ್ಕೆ ಸಂಬಂಧಿಸಿ ಪಿ.ಎಚ್‌.ಡಿ ಪದವಿಯನ್ನು ಪಡೆದರು. ಕಳೆದ ನಾಲ್ಕೈದು ದಶಕಗಳ ಕಾಲ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ವಿವಿಧ ವಿಭಾಗಗಳಲ್ಲಿ ಪ್ರಾಧ್ಯಾಪಕ ರಾಗಿ ಕೆಲಸ ಮಾಡಿದ ಪ್ರೊ. ನರಸಿಂಹ ಅವರು ಅಲ್ಲಿ ಸೆಂಟರ್ ಫಾರ್ ಅಟ್‌ಮಾಸ್ಫಿಯರಿಕ್ ಸೈನ್ಸಸ್ ವಿಭಾಗವನ್ನು ಆರಂಭಿಸಿದವರು. 1984ರಿಂದ 1993ರವರೆಗೆ ಅವರು ಬೆಂಗಳೂರಿನ ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಗಳ ನಿರ್ದೇಶಕರಾಗಿದ್ದರು. ಅವರ ವೈಜ್ಞಾನಿಕ ಸಂಶೋಧನೆಗಳು ಮುಖ್ಯವಾಗಿ ದ್ರವಚಲನಶಾಸ್ತ್ರ(ಫ್ಲುಯಿಡ್ ಡೈನಮಿಕ್ಸ್‌)ದ ವಲಯದಲ್ಲಿ ನಡೆದಿವೆ. ಅವರು ವಿಜ್ಞಾನ/ತಂತ್ರಜ್ಞಾನದಲ್ಲಿ ಮಾಡಿರುವ ಈ ಸಂಶೋಧನೆಗಳನ್ನು ಗೌರವಿಸಿ ಲಂಡನ್ನಿನ ರಾಯಲ್ ಸೊಸೈಟಿಯ ಫೆಲೋ ಆಗಿಯೂ, ಅಮೇರಿಕಾದ ರಾಷ್ಟ್ರೀಯ ವಿಜ್ಞಾನ, ಎಂಜಿನಿಯರಿಂಗ್ ಅಕಾಡೆಮಿಗಳೆರಡೂ ಸದಸ್ಯರಾಗಿಯೂ ನರಸಿಂಹ ಅವರನ್ನು ಚುನಾಯಿಸಿದ್ದಾರೆ. ಕೆಲಕಾಲ ಬೆಂಗಳೂರಿನ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್‌ಸ್ಡ್‌ ಸ್ಟಡೀಸ್ ಸಂಸ್ಥೆಯ ಮುಖ್ಯಸ್ಥರಾಗಿದ್ದ ಅವರು ಅಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನಗಳ ಇತಿಹಾಸವನ್ನು ಕುರಿತ ವಿಶೇಷ ಅಧ್ಯಯನ ನಡೆಸಿದ್ದಾರೆ. ಪ್ರಸ್ತುತ, ಪ್ರೊ. ನರಸಿಂಹ ಅವರು, ಬೆಂಗಳೂರಿನ ಜವಹರಲಾಲ್ ನೆಹರೂ ಸೆಂಟರ್ ಫಾರ್ ಅಡ್ವಾನ್‌ಸ್ಡ್‌ ಸೈಂಟಿಫಿಕ್ ರಿಸರ್ಚ್‌ ಸಂಸ್ಥೆಯ ಎಂಜಿನಿಯರಿಂಗ್ ಮೆಖ್ಯಾನಿಕ್ಸ್‌ ವಿಭಾಗದ ಮುಖ್ಯಸ್ಥರಾಗಿದ್ದಾರೆ; ದೇಶವಿದೇಶದ ಹಲವು ಕಡೆ ತಮ್ಮ ಸಂಶೋಧನೆ ಮತ್ತು ಪ್ರಬಂಧಮಂಡನೆಗಳನ್ನು ನಡೆಸಿದ್ದಾರೆ. ಇಂಡಿಯನ್ ಅಕಾಡೆಮಿ ಅಫ್ ಸೈನ್ಸಸ್‌ನ ಅಧ್ಯಕ್ಷರೂ ಆಗಿದ್ದ ಅವರು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಹಲವಾರು ರಾಷ್ಟ್ರೀಯ ಮತ್ತು ಅಂತರ್ರಾಷ್ಟ್ರೀಯ ಸಲಹಾಸಮಿತಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

 

ಪುಟಗಳು: 170

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !